alex Certify ಮತ್ತೊಮ್ಮೆ ಜೋಡಿಯಾಗಲಿದ್ದಾರೆ ನಿರ್ದೇಶಕ ಸಂತೋಷ್ ಆನಂದ್ ರಾಮ್ – ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮತ್ತೊಮ್ಮೆ ಜೋಡಿಯಾಗಲಿದ್ದಾರೆ ನಿರ್ದೇಶಕ ಸಂತೋಷ್ ಆನಂದ್ ರಾಮ್ – ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್

ಬೆಂಗಳೂರು: ಸಂತೋಷ್ ಆನಂದ್ ರಾಮ್ ನಿರ್ದೇಶನದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದಲ್ಲಿ ಮೂಡಿಬರುತ್ತಿರುವ ’ಯುವರತ್ನ’ ಚಿತ್ರ ಬಿಡುಗಡೆಗೂ ಮುನ್ನವೇ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಹೊರಬಿದ್ದಿದೆ.

ಸಂತೋಷ್ ಆನಂದ್ ರಾಮ್, ಇದೀಗ ಪುನೀತ್ ರಾಜ್ ಕುಮಾರ್ ಅವರ ಮತ್ತೊಂದು ಚಿತ್ರಕ್ಕೆ ಆಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ. ಇನ್ನೊಂದು ವಿಶೇಷವೆಂದರೆ ಸಂತೋಷ್ ಆನಂದ್ ರಾಮ್ ಹಾಗೂ ಪುನೀತ್ ರಾಜ್ ಕುಮಾರ್ ಕಾಂಬಿನೇಷನ್ ನ ’ರಾಜಕುಮಾರ’ ಹಾಗೂ ’ಯುವರತ್ನ’ ಚಿತ್ರಕ್ಕೆ ಬಂಡವಾಳ ಹಾಕಿದ್ದ ವಿಜಯ್ ಕಿರಗಂದೂರ್ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಇದೀಗ ಹೊಸ ಚಿತ್ರಕ್ಕೂ ನಿರ್ಮಾಣ ಮಾಡಲು ಸಿದ್ಧವಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ನಿರ್ದೇಶಕ ಸಂತೋಷ್ ಆನಂದ್ ರಾಮ್, ಬಹಳ ಜನ ನನ್ನ ಮುಂದಿನ ಚಿತ್ರವೂ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆನಾ ಎಂದು ಕೇಳುತ್ತಿದ್ದರು. ಹೌದು. ನನ್ನ ಮುಂದಿನ ಸಿನಿಮಾ ಕೂಡ ನನ್ನ ಐಕಾನ್ ಪುನೀತ್ ರಾಜ್ ಕುಮಾರ್ ಜೊತೆ ಮಾಡಲಿದ್ದೇನೆ. ಅವರ ಜೊತೆ 3ನೇ ಬಾರಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...