ಶ್ರೀಮುರಳಿ ನಟನೆಯ ಮಹೇಶ್ ಕುಮಾರ್ ನಿರ್ದೇಶನದ ‘ಮದಗಜ’ ಚಿತ್ರದ ಕನ್ನಡ ಟೀಸರ್ ಅನ್ನು ಡಿಸೆಂಬರ್ 17 ಶ್ರೀಮುರಳಿ ಹುಟ್ಟುಹಬ್ಬದ ದಿನ ಬಿಡುಗಡೆ ಮಾಡಿದ್ದರು.
ತೆಲುಗಿನ ಟೀಸರ್ ಅನ್ನು ಇಂದು ಹೊಸ ವರ್ಷದ ಪ್ರಯುಕ್ತ ಬಿಡುಗಡೆ ಮಾಡಿದ್ದು ಈ ಟೀಸರ್ ಸಾಕಷ್ಟು ವೀಕ್ಷಣೆಯನ್ನು ಪಡೆದುಕೊಳ್ಳುವ ಮೂಲಕ ಸಿನಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದೆ.
ಈ ಚಿತ್ರದಲ್ಲಿ ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿದ್ದು, ಉಮಾಪತಿ ಶ್ರೀನಿವಾಸ್ ಗೌಡ ನಿರ್ಮಾಣ ಮಾಡಿದ್ದಾರೆ. ಶ್ರೀಮುರಳಿ ಅಭಿಮಾನಿಗಳಲ್ಲಿ ಈ ಸಿನಿಮಾ ಬಗ್ಗೆ ಸಾಕಷ್ಟು ನಿರೀಕ್ಷೆ ಹೆಚ್ಚಿಸಿದೆ.