ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಳಿಕ ಮಹಾರಾಷ್ಟ್ರ ಸರ್ಕಾರದ ವಿರುದ್ಧ ತಿರುಗಿ ಬಿದ್ದಿರುವ ನಟಿ ಕಂಗನಾ ರಣಾವತ್, ಪದೇ ಪದೇ ಹೇಳಿಕೆಗಳನ್ನು ನೀಡುತ್ತಾ ಬಂದಿದ್ದಾರೆ. ಇದು ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸರ್ಕಾರಕ್ಕೆ ದಾರಿ ಮುಜುಗರವನ್ನು ತಂದೊಡ್ಡುತ್ತಿದೆ.
ಮುಂಬೈಯನ್ನು ಪಾಕ್ ಆಕ್ರಮಿತ ಕಾಶ್ಮೀರಕ್ಕೆ ಹೋಲಿಸಿದ್ದ ಕಂಗನಾ, ಶಿವಸೇನೆಯನ್ನು ಸೋನಿಯಾ ಸೇನೆ ಎನ್ನುವ ಮೂಲಕ ವ್ಯಂಗ್ಯವಾಡಿದ್ದರು. ಅಲ್ಲದೆ ಮುಂಬೈ ಪೊಲೀಸರ ಕಾರ್ಯವೈಖರಿಯನ್ನೂ ಪ್ರಶ್ನಿಸಿದ್ದ ಕಂಗನಾ ಈಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ.
ಡ್ರಗ್ಸ್ ಜಾಲದೊಂದಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಮುದ್ದಿನ ಮಗ ಆದಿತ್ಯ ಠಾಕ್ರೆ ನಂಟು ಹೊಂದಿದ್ದು, ತಾವು ಈಗ ಡ್ರಗ್ಸ್ ದಂಧೆ ಕುರಿತು ಮಾಹಿತಿ ಬಹಿರಂಗಪಡಿಸುತ್ತಿರುವ ಕಾರಣ ತಮಗೆ ನಿರಂತರ ಕಿರುಕುಳ ನೀಡಲಾಗುತ್ತಿದೆ ಎಂಬ ಗುರುತರ ಆರೋಪ ಮಾಡಿದ್ದಾರೆ.