
ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿರುವ ತಮಿಳಿನ ಖ್ಯಾತ ನಟ ವಿಜಯ್ ಅವರ ಬಹುನಿರೀಕ್ಷೆಯ ‘ಮಾಸ್ಟರ್’ ಚಿತ್ರವನ್ನು ಜನವರಿ 13 ರಂದು ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ.
ಲೋಕೇಶ್ ಕನಗರಾಜ್ ಈ ಚಿತ್ರವನ್ನು ನಿರ್ದೇಶಿಸಿದ್ದು, ಮಾಳವಿಕಾ ಮೋಹನ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಜನವರಿ 13 ರಂದು ಪೊಂಗಲ್ ಹಬ್ಬದ ಪ್ರಯುಕ್ತ ಈ ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.
