alex Certify ಮಿಸ್‌ ಮಾಡಿಕೊಂಡ ಅಮೂಲ್ಯ ಕ್ಷಣಗಳನ್ನು ನೆನಪಿಸಿಕೊಂಡ ನಟಿ ರಾಧಿಕಾ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಿಸ್‌ ಮಾಡಿಕೊಂಡ ಅಮೂಲ್ಯ ಕ್ಷಣಗಳನ್ನು ನೆನಪಿಸಿಕೊಂಡ ನಟಿ ರಾಧಿಕಾ..!

ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ರಾಧಿಕಾ ಪಂಡಿತ್, ಆಗಾಗ ಅಭಿಮಾನಿಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಭೇಟಿಯಾಗುತ್ತಲೇ ಇದ್ದಾರೆ. ಕೊರೊನಾದಿಂದಾಗಿ ಮನೆಯಲ್ಲಿಯೇ ಉಳಿದಿರುವ ರಾಧಿಕಾ ಪಂಡಿತ್, ಇದೀಗ ತಾವು ಮಿಸ್ ಮಾಡಿಕೊಂಡ ಕ್ಷಣಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮೊದಲಿನಿಂದಲೂ ರಾಧಿಕಾ ಪಂಡಿತ್‌ಗೆ ಬೀಚ್ ಎಂದರೆ ಇಷ್ಟ. ಆದರೆ ಇದೀಗ ಲಾಕ್‌ಡೌನ್‌ನಿಂದಾಗಿ ಅದನ್ನು ಮಿಸ್ ಮಾಡಿಕೊಳ್ಳುತ್ತಿದ್ದಾರಂತೆ. ಹೀಗಂತ ರಾಧಿಕಾ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿಕೊಂಡಿದ್ದಾರೆ. ಇದರ ಜೊತೆಗೆ ಒಂದಿಷ್ಟು ಅಮೂಲ್ಯ ಕ್ಷಣಗಳನ್ನು ಮಿಸ್ ಮಾಡಿಕೊಂಡಿದ್ದಾರಂತೆ.

ಕಳೆದ 5 ತಿಂಗಳುಗಳಿಂದ ನಾನು ಸಮುದ್ರವನ್ನು ಮಿಸ್ ಮಾಡುತ್ತಿದ್ದೇನೆ. ನನ್ನ ಮಕ್ಕಳನ್ನು ಪಾರ್ಕಿಗೆ ಕರೆದುಕೊಂಡು ಹೋಗುವುದನ್ನು ಮಿಸ್ ಮಾಡುತ್ತಿದ್ದೇನೆ. ಈ ದಿನಗಳಲ್ಲಿ ಸ್ನೇಹಿತರನ್ನು ಭೇಟಿಯಾಗುವುದನ್ನು ಮಿಸ್ ಮಾಡುತ್ತಿದ್ದೇನೆ. ಇನ್ನೂ ಹಲವಾರು ವಿಚಾರಗಳನ್ನು ಮಿಸ್ ಮಾಡುತ್ತಿದ್ದೇನೆ. ಆದರೂ ನಾವು ಜವಾಬ್ದಾರಿಯಿಂದ ಇರಬೇಕಾದ ಸ್ಥಿತಿ ಇದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...