alex Certify ಮುಂದಿನ ತಿಂಗಳು ಕೆಜಿಎಫ್ ಅಖಾಡಕ್ಕೆ ಅಧೀರನ ಎಂಟ್ರಿ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂದಿನ ತಿಂಗಳು ಕೆಜಿಎಫ್ ಅಖಾಡಕ್ಕೆ ಅಧೀರನ ಎಂಟ್ರಿ…?

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್-2 ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು, ಇದೀಗ ನವೆಂಬರ್ ನಲ್ಲಿ ಅಧೀರನ ಪಾತ್ರಧಾರಿ ಬಾಲಿವುಡ್ ನಟ ಸಂಜಯ್ ದತ್ ಕೆಜಿಎಫ್ ಚಿತ್ರೀಕರಣದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

ಎರಡು ದಿನಗಳ ಹಿಂದೆ ಉಡುಪಿಯಲ್ಲಿ ಬೀಡು ಬಿಟ್ಟಿದ್ದ ಕೆಜಿಎಫ್ ಚಿತ್ರತಂಡ ಈಗಾಗಲೇ ಅಲ್ಲಿ ಚಿತ್ರೀಕರಣ ಪೂರ್ಣಗೊಳಿಸಿದ್ದು, ಮುಂದೆ ಬೆಂಗಳೂರು ಹಾಗೂ ಹೈದರಾಬಾದ್ ನಲ್ಲಿ ಶೂಟಿಂಗ್ ಮಾಡುವುದಾಗಿ ತಿಳಿಸಿದೆ.

ಕೆಜಿಎಫ್-2 ಚಿತ್ರದಲ್ಲಿ ಬಾಲಿವುಡ್ ನಟ ಸಂಜಯ್ ದತ್ ಅಧೀರನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಅವರು ಅನಾರೋಗ್ಯದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಕೆಜಿಎಫ್ ಚಿತ್ರದ ಶೂಟಿಂಗ್ ನಲ್ಲಿ ಭಾಗಿಯಾಗುತ್ತಾರಾ ಎಂಬ ಹಲವು ಪ್ರಶ್ನೆಗಳು ಅಭಿಮಾನಿಗಳಲ್ಲಿ ಮೂಡಿದ್ದವು. ಇದೀಗ ಚಿತ್ರತಂಡದ ಮೂಲಗಳ ಪ್ರಕಾರ ನವೆಂಬರ್ ನಲ್ಲಿ ಸಂಜಯ್ ದತ್ ಚಿತ್ರೀಕರಣದಲ್ಲಿ ಭಾಗಿಯಾಗುತ್ತಾರೆ ಎನ್ನಲಾಗಿದೆ.

ನವೆಂಬರ್ ನಲ್ಲಿ ಮುಂಬೈನಲ್ಲಿ ಚಿತ್ರೀಕರಣ ನಡೆಯಲಿದ್ದು, ಸಂಜಯ್ ದತ್ ಅವರು ಹೇಳಿದ ಸ್ಥಳದಲ್ಲೇ ಚಿತ್ರೀಕರಣ ನಡೆಸುವ ಬಗ್ಗೆಯೂ ಚಿತ್ರ ತಂಡ ನಿರ್ಧರಿಸಿದೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...