alex Certify ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ ಸೋಂಕು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಗಾಸ್ಟಾರ್ ಚಿರಂಜೀವಿಗೆ ಕೊರೊನಾ ಸೋಂಕು

ಹೈದರಾಬಾದ್: ಕೊರೊನಾ ಹಾವಳಿ ದೇಶಾದ್ಯಂತ ಮುಂದುವರೆದಿದ್ದು, ಎಲ್ಲಾ ಕ್ಷೇತ್ರಗಳುಗೂ ತನ್ನ ಕಬಂದ ಬಾಹು ಚಾಚಿದೆ. ಇದೀಗ ನಟ ಮೆಗಾಸ್ಟಾರ್ ಚಿರಂಜೀವಿ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಮೆಗಾಸ್ಟಾರ್, ಆಚಾರ್ಯ ಸಿನಿಮಾ ಶೂಟಿಂಗ್ ಗೂ ಮೊದಲು ತಾವು ಕೋವಿಡ್ ಟೆಸ್ಟ್ ಗೆ ಒಳಗಾಗಿದ್ದು, ಈ ವೇಳೆ ಕೋವಿಡ್ ಪಾಸಿಟೀವ್ ಬಂದಿದೆ. ಆದರೆ ತಮಗೆ ಯಾವುದೇ ಕೊರೊನಾ ಸೋಂಕಿನ ಲಕ್ಷಣಗಳು ಇಲ್ಲ ಎಂದು ತಿಳಿಸಿದ್ದಾರೆ.

ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ತಾವು ಹೋಮ್ ಕ್ವಾರಂಟೈನ್ ಆಗುತ್ತಿದ್ದು, ಕಳೆದ ಕೆಲ ದಿನಗಳಿಂದ ತನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...