ನಟ ಹಾಗೂ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ 2020 ಏಪ್ರಿಲ್ 17ರಂದು ರೇವತಿ ಅವರೊಂದಿಗೆ ರಾಮನಗರದ ಕೇತಗಾನಹಳ್ಳಿಯ ಫಾರ್ಮ್ ಹೌಸ್ ನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಕೊರೊನಾ ಮಹಾಮಾರಿಯ ಅಟ್ಟಹಾಸದ ನಡುವೆಯೂ ಕೆಲವೇ ಜನರ ಸಮ್ಮುಖದಲ್ಲಿ ಸರಳವಾಗಿ ವಿವಾಹವಾಗಿದ್ದರು. ಇಂದಿಗೆ ಇವರಿಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟು 1 ವರ್ಷ ಕಳೆದಿವೆ. ಈ ಸಂತಸವನ್ನು ನಿಖಿಲ್ ಕುಮಾರಸ್ವಾಮಿ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.
ಬಾಲಿವುಡ್ ನಟ ಸೋನು ಸೂದ್ಗೆ ಕೊರೊನಾ ಸೋಂಕು….!
ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ ವರ್ಷ. ಎಂದಿಗೂ ಮರೆಯಲಾಗದ ದಿವಸ. ನಮ್ಮನ್ನು ಆಶೀರ್ವದಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮ ಪ್ರೀತಿ ಹಾರೈಕೆಗಳು ಸದಾ ಹೀಗೆ ಇರಲಿ ಎಂದು ನಿಖಿಲ್ ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದು, ಇದಕ್ಕೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.
https://www.instagram.com/p/CNwIfXCJ-1-/?utm_source=ig_web_copy_link