ಡ್ರಗ್ಸ್ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ನಟಿ ರಾಗಿಣಿ ದ್ವಿವೇದಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ತಮ್ಮ ಪ್ರತಿಯೊಂದು ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುತ್ತಲೇ ಇರುತ್ತಾರೆ. ಇದೀಗ ನಟಿ ರಾಗಿಣಿ ದ್ವಿವೇದಿ ಯೋಗಾಸನ ಮಾಡುತ್ತಿರುವ ತಮ್ಮ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಶೇರ್ ಮಾಡಿದ್ದಾರೆ. ಈ ವಿಡಿಯೋಗೇ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ
ಸಿನಿಮಾ ವಿಚಾರಕ್ಕೆ ಬಂದರೆ ನಟಿ ರಾಗಿಣಿ ದ್ವಿವೇದಿ ‘ಜಾನಿವಾಕರ್’ ಎಂಬ ಹೊಸ ಸಿನಿಮಾದಲ್ಲಿ ಅಭಿನಯಿಸುತ್ತಿದ್ದು, ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ವೇದಿಕ್ ವೀರ್ ನಿರ್ದೇಶನದ ಈ ಚಿತ್ರದಲ್ಲಿ ಅಭಯ್ ನಾಯಕನಾಗಿ ಅಭಿನಯಿಸುತ್ತಿದ್ದಾರೆ.
https://www.instagram.com/tv/CNIO28mnXd9/?utm_source=ig_web_copy_link