‘ದಬಾಂಗ್ 3’ ಚಿತ್ರದಲ್ಲಿ ನಟಿಸಿದ್ದ ಸಲ್ಮಾನ್ ಖಾನ್ ಇದೀಗ ಎರಡು ವರ್ಷಗಳ ಬಳಿಕ ‘ರಾಧೆ’ ಸಿನಿಮಾ ಮೂಲಕ ದರ್ಶನ ನೀಡುತ್ತಿದ್ದಾರೆ ಮೇ 13 ಈದ್ ಮಿಲಾದ್ ಹಬ್ಬದಂದು ಈ ಚಿತ್ರ ರಿಲೀಸ್ ಆಗುತ್ತಿದ್ದು. ಸಲ್ಮಾನ್ ಖಾನ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈಗಾಗಲೇ ರಾಧೆ ಸಿನಿಮಾದ 2 ಹಾಡುಗಳನ್ನು ರಿಲೀಸ್ ಮಾಡಿದ್ದು ಯುಟ್ಯೂಬ್ ನಲ್ಲಿ ಧೂಳೆಬ್ಬಿಸಿವೆ.
32ನೇ ವಸಂತಕ್ಕೆ ಕಾಲಿಟ್ಟ ಬಹುಭಾಷಾ ನಟಿ ಲಕ್ಷ್ಮಿ ರೈ
ಇದೀಗ ರಾಧೆ ಚಿತ್ರದ ಟೈಟಲ್ ಟ್ರ್ಯಾಕ್ ವೊಂದನ್ನು ಇಂದು ಜೀ ಮ್ಯೂಸಿಕ್ ಕಂಪನಿ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದು, ಬಿಡುಗಡೆಯಾದ ಕೆಲವೇ ನಿಮಿಷಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದುಕೊಂಡಿದೆ. ಪ್ರಭುದೇವ ನಿರ್ದೇಶನದ ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಗೆ ಜೋಡಿಯಾಗಿ ನಟಿ ದಿಶಾ ಪಟಾನಿ ಅಭಿನಯಿಸಿದ್ದಾರೆ.