ಬೆಂಗಳೂರು: ಸಂಕ್ರಾಂತಿ ಹಬ್ಬಕ್ಕೆ ಸ್ಯಾಂಡಲ್ ವುಡ್ ನಿರ್ದೇಶಕ ರಿಷಬ್ ಶೆಟ್ಟಿ ಅಭಿಮಾನಿಗಳಿಗೆ ಉಡುಗೊರೆ ನೀಡಿದ್ದು, ರಿಷಬ್ ಶೆಟ್ಟಿ ನಟಿಸಿ ನಿರ್ಮಿಸಿರುವ ಹೀರೋ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ.
ಲಾಕ್ ಡೌನ್ ಸಂದರ್ಭದಲ್ಲಿಯೇ ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ಮಾಡಿ ಮುಗಿಸಿದ್ದ ಹೀರೋ ಚಿತ್ರತಂಡ ಇದೀಗ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದೆ. ಹೀರೋಗೆ ನಾಯಕಿಯಾಗಿ ಗಾನವಿ ಲಕ್ಷ್ಮಣ್ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.
ಹೀರೋ ಕಾಮಿಡಿ ಥ್ರಿಲ್ಲರ್ ಸಿನಿಮಾ ಆಗಿದ್ದು, ಹೇರ್ ಸ್ಟೈಲಿಸ್ಟ್ ಪಾತ್ರದಲ್ಲಿ ರಿಷಬ್ ಕಾಣಿಸಿಕೊಂಡರೆ ಪ್ರಮೋದ್ ಶೆಟ್ಟಿ ವಿಲನ್ ಪಾತ್ರದಲ್ಲಿ ಮಿಂಚಿದ್ದಾರೆ. ಹೀರೋಗೆ ಭರತ್ ರಾಜ್ ಆಕ್ಷನ್ ಕಟ್ ಹೇಳಿದ್ದು, ಅಜನೀಶ್ ಲೋಕನಾಥ್ ಸಂಗೀತವಿದೆ.
ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ರಿಷಬ್ ಶೆಟ್ಟಿ ಕೈಯಲ್ಲಿ ಸದ್ಯ ಹರಿಕಥೆಯಲ್ಲ ಗಿರಿಕಥೆ, ನಾತುರಾಮ್, ಮಹನಿಯರೇ ಮಹಿಳೆಯರೇ, ಬೆಲ್ ಬಾಟಂ-2, ಗರುಡ ಗಮನ ವೃಷಭ ವಾಹನ ಸೇರಿದಂತೆ ಹಲವು ಚಿತ್ರಗಳಿವೆ.