
ಇಂದು ರೆಬಲ್ ಸ್ಟಾರ್ ಅಂಬರೀಶ್ ಅವರ ಎರಡನೇ ವರ್ಷದ ಪುಣ್ಯ ಸ್ಮರಣೆಯಾಗಿದ್ದು ಈ ಹಿನ್ನೆಲೆಯಲ್ಲಿ ಚಿತ್ರನಟ ಹಾಗೂ ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಲ್ಲಿ ಕೆಲ ಸಾಲುಗಳನ್ನು ಬರೆದುಕೊಳ್ಳುವ ಮೂಲಕ ಅಂಬರೀಶ್ ಅವರಿಗೆ ನಮನ ಸಲ್ಲಿಸಿದ್ದಾರೆ.
ಕನ್ನಡ ಮಣ್ಣಿನ ಹೆಮ್ಮೆಯ ಮಗ, ಖ್ಯಾತ ಚಲನಚಿತ್ರ ನಟ, ಕೇಂದ್ರದ ಮಾಜಿ ಸಚಿವರು ಹಾಗೂ ಜನಸಾಮಾನ್ಯರ ಪಾಲಿಗೆ ಕಲಿಯುಗದ ಕರ್ಣ ಎಂದೇ ಹೆಸರು ಪಡೆದಿದ್ದ ಶ್ರೀ ಅಂಬರೀಶ್ ಅವರ ಪುಣ್ಯಸ್ಮರಣೆಯಂದು ನನ್ನ ನಮನಗಳು ಎಂದು ಬಿ.ಸಿ. ಪಾಟೀಲ್ ಬರೆದುಕೊಂಡಿದ್ದಾರೆ.