
ನಿರೂಪ್ ಭಂಡಾರಿ ಅಭಿನಯದ ಶೀತಲ್ ಶೆಟ್ಟಿ ನಿರ್ದೇಶನದ ‘ವಿಂಡೋಸೀಟ್’ ಚಿತ್ರದ ‘ಅತಿ ಚಂದದ’ ಎಂಬ ಲಿರಿಕಲ್ ಹಾಡು ಕಳೆದ ತಿಂಗಳು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿತ್ತು ಈ ಹಾಡು ಇದೀಗ 1 ಮಿಲಿಯನ್ ವೀವ್ಸ್ ಪಡೆದಿದ್ದು ನೋಡುಗರಿಂದ ಮೆಚ್ಚುಗೆಯನ್ನು ಪಡೆದುಕೊಂಡಿದೆ.
ವಿಜಯ್ ಪ್ರಕಾಶ್ ಈ ಹಾಡಿಗೆ ಧ್ವನಿ ನೀಡಿದ್ದರು. ನಟ ನಿರೂಪ್ ಭಂಡಾರಿ ಈ ಚಿತ್ರದಲ್ಲಿ ಮ್ಯೂಜಿಷಿಯನ್ ಪಾತ್ರದಲ್ಲಿ ನಟಿಸಿದ್ದು, ಸಂಜನಾ ಆನಂದ್ ಹಾಗೂ ಅಮೃತಾ ಅಯ್ಯಂಗಾರ್ ಇಬ್ಬರು ನಾಯಕಿಯರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.