![](https://kannadadunia.com/wp-content/uploads/2020/11/f0d394b2-d0cb-41c9-b660-01e963d41a25.jpg)
ಶೀತಲ್ ಶೆಟ್ಟಿ ನಿರ್ದೇಶನದ ನಿರೂಪ್ ಭಂಡಾರಿ ನಟನೆಯ ‘ವಿಂಡೋ ಸೀಟ್’ ಚಿತ್ರದ ಟೀಸರ್ ಅನ್ನು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆ ಮಾಡಿದ್ದಾರೆ.
ಈ ಸಿನಿಮಾದಲ್ಲಿ ಅಮೃತಾ ಅಯ್ಯಂಗಾರ್ ಹಾಗೂ ಸಂಜನಾ ಆನಂದ್ ಇಬ್ಬರು ನಾಯಕಿಯರು ನಟಿಸಿದ್ದು ಪ್ರೇಕ್ಷಕರಿಂದ ಟೀಸರ್ ಗೆ ಮೆಚ್ಚುಗೆ ವ್ಯಕ್ತವಾಗಿದೆ.
ಜಾಕ್ ಮಂಜು ಈ ಚಿತ್ರವನ್ನು ನಿರ್ಮಿಸಿದ್ದು, ಶುಕ್ರವಾರ ಬಿಡುಗಡೆಯಾದ ಟೀಸರ್ ನೋಡಿದ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆಗಳು ದೊರೆತಿದೆ ಹಾಗೂ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿಸಿದೆ.