‘ಚಿನ್ನಾರಿ ಮುತ್ತ’ ಸಿನಿಮಾ ಮೂಲಕ ಬಾಲನಟನಾಗಿ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ವಿಜಯ್ ರಾಘವೇಂದ್ರ ಅವರ 50 ನೇ ಸಿನಿಮಾದ ಟೈಟಲ್ ಅನ್ನು ವಿಜಯದಶಮಿ ಹಬ್ಬದ ಪ್ರಯುಕ್ತ ಬಿಡುಗಡೆ ಮಾಡಿದ್ದಾರೆ.
ಈ ಚಿತ್ರಕ್ಕೆ ‘ಸೀತಾರಾಮ್ ಬಿನೋಯ್’ ಎಂಬ ಹೆಸರಿಟ್ಟಿದ್ದು ಕೇಸ್ ನಂ.18 ಎಂಬ ಟ್ಯಾಗ್ ಲೈನ್ ಕೂಡ ಇದೆ. ವಿಜಯ್ ರಾಘವೇಂದ್ರ ಅವರು ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಸಿನಿಮಾವನ್ನು ದೇವಿಪ್ರಸಾದ್ ಶೆಟ್ಟಿ ನಿರ್ದೇಶಿಸುತ್ತಿದ್ದು, ನಿರ್ಮಾಣದ ಜವಾಬ್ದಾರಿಯನ್ನು ಹೊತ್ತಿದ್ದಾರೆ.