ಇಂದು ಸಾಹಸ ಸಿಂಹ ವಿಷ್ಣುವರ್ಧನ್ ಅವರ 11ನೇ ಪುಣ್ಯ ಸ್ಮರಣೆಯಾಗಿದ್ದು, ಕನ್ನಡ ಚಿತ್ರರಂಗದ ಸಾಕಷ್ಟು ಕಲಾವಿದರು ಸಾಮಾಜಿಕ ಜಾಲತಾಣದಲ್ಲಿ ವಿಷ್ಣುವರ್ಧನ್ ಅವರಿಗೆ ನಮನ ಸಲ್ಲಿಸಿದ್ದಾರೆ.
ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಕೆಲ ಸಾಲುಗಳನ್ನು ಬರೆದುಕೊಳ್ಳುವ ಮೂಲಕ ವಿಷ್ಣುವರ್ಧನ್ ಅವರನ್ನು ಸ್ಮರಿಸಿದ್ದಾರೆ.
ಇವರ ಮೇಲಿನ ಅಭಿಮಾನ, ಪ್ರೀತಿ ಎಂದಿಗೂ ಕಮ್ಮಿಯಾಗಿಲ್ಲ. ಅಭಿಮಾನಿಗಳ ಹೃದಯದಲ್ಲಿ ನಿರಂತರ ಯಜಮಾನವಾಗಿರುವ ನಮ್ಮೆಲ್ಲರ ಪ್ರೀತಿಯ ಸಾಹಸ ಸಿಂಹ ಅಭಿನಯ ಭಾರ್ಗವ ವಿಷ್ಣು ದಾದ ನೀವು ನಮ್ಮ ಹೃದಯದಲ್ಲಿ ಸದಾ ಜೀವಂತ. ವಿಷ್ಣುದಾದ ನೀವು ಜನರ ಮನದಲ್ಲಿ ಎಂದಿಗೂ ಅಜರಾಮರ…..ಎಂದು ಬರೆದುಕೊಂಡಿದ್ದಾರೆ.
https://www.instagram.com/p/CJaj7B1JORg/?utm_source=ig_web_copy_link