ಚೆನ್ನೈ: ಬಲಗಾಲಿನ ಶಸ್ತ್ರಚಿಕಿತ್ಸೆ ಬಳಿಕ ಚೇತರಿಸಿಕೊಂಡಿರುವ ನಟ ಕಮಲ್ ಹಾಸನ್ ಚೆನ್ನೈ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಶಸ್ತ್ರಚಿಕಿತ್ಸೆ ಬಳಿಕ ಕಮಲ್ ಹಾಸನ್ ಎರಡು ದಿನಗಳ ಕಾಲ ಶ್ರೀ ರಾಮಚಂದ್ರ ಮೆಡಿಕಲ್ ಸೆಂಟರ್ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದರು. ಇದೀಗ ಡಿಸ್ಚಾರ್ಜ್ ಆಗಿ ಈಸ್ಟ್ ಕೋಸ್ಟ್ ರೋಡ್ ನ ಮನೆಗೆ ತೆರಳಿರುವ ಕಮಲ್, ವೈದ್ಯರ ಸಲಹೆ ಮೇರೆಗೆ ಇನ್ನು ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯಲಿದ್ದಾರೆ. ಬಳಿಕ ತಮಿಳುನಾಡು ಚುನಾವಣಾ ಪ್ರಚಾರದಲ್ಲಿ ತೊಡಗಲಿದ್ದಾರೆ.
ಆಸ್ಪತ್ರೆಯಿಂದ ಮನೆಗೆ ಮರಳಿದ ಕಮಲ್ ಹಾಸನ್ ಗೆ ಅವರ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.