ಸ್ಯಾಂಡಲ್ ವುಡ್ ನ ಬಾಕ್ಸಾಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ರಾಬರ್ಟ್’ ಚಿತ್ರ ನಾಳೆ ತೆರೆ ಮೇಲೆ ಬರುತ್ತಿದ್ದು ಈಗಾಗಲೇ ಡಿ ಬಾಸ್ ಅಭಿಮಾನಿಗಳು ಕಟೌಟ್ ಗೆ ಹಾರ ಹಾಕಿ ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸುತ್ತಿದ್ದಾರೆ ಕನ್ನಡ ಹಾಗೂ ತೆಲುಗಿನಲ್ಲಿ ಈ ಚಿತ್ರ ಬಿಡುಗಡೆಯಾಗುತ್ತಿದ್ದು ಟ್ರೈಲರ್ ಹಾಗೂ ಹಾಡುಗಳ ಮೂಲಕ ಈ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ. ದರ್ಶನ್ ಅವರ ಹೊಸ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಮುಹೂರ್ತ ನೆರವೇರಿಸಿದ ‘ಕಥಾನಾಯಕ’ ಚಿತ್ರತಂಡ
ತರುಣ್ ಸುಧೀರ್ ನಿರ್ದೇಶನದ ಈ ಚಿತ್ರದಲ್ಲಿ ಆಶಾ ಭಟ್ ನಾಯಕಿಯಾಗಿ ನಟಿಸಿದ್ದು ಉಮಾಪತಿ ಶ್ರೀನಿವಾಸ್ ಗೌಡ ಬಂಡವಾಳ ಹೂಡಿದ್ದಾರೆ. ಈ ಸಿನಿಮಾದಲ್ಲಿ ವಿನೋದ್ ಪ್ರಭಾಕರ್, ಹಿರಿಯ ನಟ ದೇವರಾಜ್, ರವಿಶಂಕರ್, ಹಾಗೂ ಕಾಮಿಡಿ ಕಲಾವಿದರಾದ ಶಿವರಾಜ್ ಕೆ ಆರ್ ಪೇಟೆ, ಚಿಕ್ಕಣ್ಣ, ಸೇರಿದಂತೆ ಮುಂತಾದ ತಾರಾಬಳಗವಿದೆ. ರವಿ ಕಿಶನ್, ಹಾಗೂ ಟಾಲಿವುಡ್ ನ ಖ್ಯಾತ ನಟ ಜಗಪತಿ ಬಾಬು ಖಳನಾಯಕರಾಗಿ ಅಭಿನಯಿಸಿದ್ದಾರೆ.