alex Certify ಶೂಟಿಂಗ್ ಸೆಟ್ ನಲ್ಲೇ ಹೃದಯಾಘಾತ; ಸ್ಯಾಂಡಲ್ ವುಡ್ ಹಿರಿಯ ನಟ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶೂಟಿಂಗ್ ಸೆಟ್ ನಲ್ಲೇ ಹೃದಯಾಘಾತ; ಸ್ಯಾಂಡಲ್ ವುಡ್ ಹಿರಿಯ ನಟ ಸಾವು

ಸ್ಯಾಂಡಲ್ ವುಡ್ ನ ಹಿರಿಯ ನಟ ರಾಕ್ ಲೈನ್ ಸುಧಾಕರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕನ್ನಡದ ಹಲವು ಸಿನಿಮಾಗಳಲ್ಲಿ ಪೋಷಕ ಹಾಗೂ ಹಾಸ್ಯಭರಿತ ಪಾತ್ರಗಳಲ್ಲಿ ಅಭಿನಯಿಸಿದ್ದ ರಾಕ್ ಲೈನ್ ಸುಧಾಕರ್ ಶೂಟಿಂಗ್ ಸೆಟ್ ನಲ್ಲೇ ಸಾವನ್ನಪ್ಪಿದ್ದಾರೆ.

ಸಿಂಪಲ್ ಸುನಿ ನಿರ್ದೇಶನದ ಚಿತ್ರದ ಶೂಟಿಂಗ್ ಒಂದರಲ್ಲಿ ಸುಧಾಕರ್ ಭಾಗಿಯಾಗಿದ್ದರು. ಮೇಕಪ್ ಹಚ್ಚಿ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದ ವೇಳೆ ಅವರಿಗೆ ಹೃದಯಾಘಾತವಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ನಿರ್ದೇಶಕ ಸುನಿ, 2020ರ ರೌದ್ರಾವತಾರ ಮುಂದುವರೆದಿದೆ. ಸಿನಿ ಕಲಾವಿದರಾದ ರಾಕ್ ಲೈನ್ ಸುಧಾಕರ್ ಇಂದು ಮೇಕಪ್ ಹಚ್ಚಿರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ.

ಇತ್ತೀಚೆಗೆ ರಾಕ್ ಲೈನ್ ಸುಧಾಕರ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಚಿಕಿತ್ಸೆ ಬಳಿಕ ಸಂಪೂರ್ಣ ಗುಣಮುಖರಾಗಿದ್ದ ಅವರು ಮತ್ತೆ ಸಿನಿಮಾ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...