ಸಲ್ಮಾನ್ ಖಾನ್ ಅಭಿನಯದ, ಪ್ರಭುದೇವ ನಿರ್ದೇಶನದ ‘ರಾಧೆ’ ಚಿತ್ರದ ಟ್ರೈಲರ್ ಅನ್ನು ಇಂದು ಜೀ ಸ್ಟೂಡಿಯೋಸ್ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಟ್ರೈಲರ್ ರಿಲೀಸ್ ಆದ 1 ಗಂಟೆಗಳಲ್ಲಿ 4 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ.
ಮೇ 13ರಂದು ಈ ಚಿತ್ರ ಬಿಡುಗಡೆಯಾಗುತ್ತಿದ್ದು, ಈ ಸಿನಿಮಾದಲ್ಲಿ ಸಲ್ಮಾನ್ ಖಾನ್ ಹಾಗೂ ದಿಶಾ ಪಟಾನಿ ಸೇರಿದಂತೆ ಜಾಕಿ ಶ್ರಾಫ್, ರಣದೀಪ್ ಹೂಡಾ, ಮೆಗಾ ಆಕಾಶ್ ಮುಂತಾದವರ ತಾರಾ ಬಳಗವಿದೆ.ಈಗಾಗಲೇ ಈ ಚಿತ್ರ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.