alex Certify ಸಾಮಾಜಿಕ ಜಾಲತಾಣ ತೊರೆದ ಕಣ್ಸನ್ನೆ ಬೆಡಗಿ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಮಾಜಿಕ ಜಾಲತಾಣ ತೊರೆದ ಕಣ್ಸನ್ನೆ ಬೆಡಗಿ…!

ಹಾಡೊಂದರಲ್ಲಿ ಆಕರ್ಷಣೀಯವಾಗಿ ಕಣ್ಣು ಮಿಟುಕಿಸುವ ಮೂಲಕ ರಾತ್ರೋರಾತ್ರಿ ಮನೆಮಾತಾದ ನಟಿ ಪ್ರಿಯಾ ಪ್ರಕಾಶ್. ‘ಒರು ಆಡಾರ್ ಲವ್’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ಈ ಬೆಡಗಿ ತಮ್ಮ ನಗು ಹಾಗೂ ಕಣ್ಸನ್ನೆ ಮೂಲಕ ಪಡ್ಡೆ ಹುಡುಗರ ಎದೆಗೆ ಕಿಚ್ಚು ಹಚ್ಚಿದ್ದರು.

ಇದಾದ ಬಳಿಕ ಆಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳ ದೊಡ್ಡ ಪಡೆಯೇ ಹುಟ್ಟಿಕೊಂಡಿತ್ತು. ಪ್ರಿಯಾ ಪ್ರಕಾಶ್, ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಖಾತೆ ತೆರೆದ ಬಳಿಕ ಒಂದೇ ದಿನದಲ್ಲಿ 6 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಪಡೆದಿದ್ದರು. ಇದೀಗ ತಮ್ಮ ಇನ್ಸ್ಟಾಗ್ರಾಂ ಖಾತೆಯನ್ನು ರದ್ದುಗೊಳಿಸುವ ಮೂಲಕ ಪ್ರಿಯಾ ಪ್ರಕಾಶ್ ಅಭಿಮಾನಿಗಳನ್ನು ನಿರಾಸೆಗೊಳಿಸಿದ್ದಾರೆ.

ಪ್ರಿಯಾ ಪ್ರಕಾಶ್ ತಮ್ಮ ಇನ್ಸ್ಟಾಗ್ರಾಂ ಖಾತೆಯನ್ನು ರದ್ದುಗೊಳಿಸಲು ಟ್ರೋಲ್ ಕಾರಣ ಎಂದು ಹೇಳಲಾಗಿದೆ. ಪ್ರಿಯಾ ಪ್ರಕಾಶ್ ಅವರ ಪ್ರತಿ ಪೋಸ್ಟನ್ನು ಕೆಟ್ಟದಾಗಿ ಟ್ರೋಲ್ ಮಾಡುತ್ತಿದ್ದ ಕಾರಣ ಬೇಸತ್ತು ಈ ನಿರ್ಧಾರ ಕೈಗೊಂಡಿದ್ದಾರೆಂದು ಹೇಳಲಾಗಿದೆ. ಆದರೆ ಇದರಿಂದ ಅವರ ಅಭಿಮಾನಿಗಳಿಗೆ ಬೇಸರವಾಗಿರುವುದಂತೂ ಖಚಿತ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...