alex Certify ಸಿಸಿಬಿ ವಿಚಾರಣೆಗೆ ಹಾಜರಾದ ನಿರೂಪಕಿ; ಡ್ರಗ್ಸ್ ಕೇಸ್ ನಲ್ಲಿ ಲಾಕ್ ಹಾಕ್ತಾರಾ ಮಾತಿನ ಮಲ್ಲಿ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಸಿಬಿ ವಿಚಾರಣೆಗೆ ಹಾಜರಾದ ನಿರೂಪಕಿ; ಡ್ರಗ್ಸ್ ಕೇಸ್ ನಲ್ಲಿ ಲಾಕ್ ಹಾಕ್ತಾರಾ ಮಾತಿನ ಮಲ್ಲಿ…?

ಮಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರೂಪಕಿ ಅನುಶ್ರೀ ಇದೀಗ ಮಂಗಳೂರು ಸಿಸಿಬಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿರುವ ಡಾನ್ಸರ್ ಕಿಶೋರ್ ಶೆಟ್ಟಿ ಹಾಗೂ ತರುಣ್ ನೀಡಿದ ಮಾಹಿತಿ ಆಧರಿಸಿ ಮಂಗಳೂರು ಸಿಸಿಬಿ ಪೊಲೀಸರು ನಿರೂಪಕಿ ಅನುಶ್ರೀ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಿದ್ದರು. ವಿಚಾರಣೆಗೆ ಹಾಜರಾಗುತ್ತಿರುವುದಾಗಿ ನಿನ್ನೆಯೇ ಅನುಶ್ರೀ ಮಂಗಳೂರಿಗೆ ತೆರಳಿದ್ದರು. ಅಲ್ಲದೇ ಸಿಸಿಬಿ ಅಧಿಕಾರಿಗಳು ಕೂಡ ಅನುಶ್ರೀ ವಿಚಾರಣೆಗೆ ಸಿದ್ಧತೆ ನಡೆಸಿಕೊಂಡಿದ್ದರು. ಆದರೆ ನಿನ್ನೆ ಅನುಶ್ರೀ ವಿಚಾರಣೆಗೆ ಹಾಜರಾಗಿರಲಿಲ್ಲ. ಅನುಶ್ರೀ ಅವರ ಈ ನಡೆ ಕುತೂಹಲಕ್ಕೆ ಕಾರಣವಾಗಿತ್ತು.

ಇದೀಗ ಇಂದು ಬೆಳಿಗ್ಗೆಯೇ ಅನುಶ್ರೀ ಮಂಗಳೂರಿನ ಪಣಂಬೂರು ಸಿಸಿಬಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಸಿಸಿಬಿ ಎಸಿಪಿ ಬೆಳ್ಳಿಯಪ್ಪ ನೇತೃತ್ವದಲ್ಲಿ ಅನುಶ್ರೀ ವಿಚಾರಣೆ ಆರಂಭವಾಗಿದ್ದು, ಮಾದಕ ಲೋಕದ ನಂಟಿನ ಬಗ್ಗೆ ಅನುಶ್ರೀ ಮಾಹಿತಿ ನೀಡಲಿದ್ದಾರಾ…? ಪ್ರಕರಣ ಸಂಬಂಧ ಸಿಸಿಬಿ ಅನುಶ್ರೀ ಅವರನ್ನು ವಶಕ್ಕೆ ಪಡೆಯಲಿದೆಯಾ ಎಂಬುದನ್ನು ಕಾದುನೋಡಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...