
ಟಾಲಿವುಡ್ ನ ಕ್ಯೂಟ್ ಬೆಡಗಿ ಸಮಂತಾ ಅಕ್ಕಿನೇನಿ ಅವರಿಗೆ ಅಭಿಮಾನಿಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈ ಹಿಂದೆ ಸಾಮಾಜಿಕ ಜಾಲತಾಣವಾದ ಇನ್ ಸ್ಟಾಗ್ರಾಂನಲ್ಲಿ 12 ಮಿಲಿಯನ್ ಫಾಲೋವರ್ಸ್ ಗಳಿಸಿದ ಖುಷಿಯನ್ನು ಹಂಚಿಕೊಂಡಿದ್ದ ನಟಿ, ಇದೀಗ ಇನ್ ಸ್ಟಾಗ್ರಾಂನಲ್ಲಿ 13 ಮಿಲಿಯನ್ ಫಾಲೋವರ್ಸ್ ತಲುಪಿದ್ದು, ಈ ಸಂತಸವನ್ನು ತಮ್ಮ ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ತಮ್ಮ ಫೋಟೋವೊಂದನ್ನು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.
