
ತೆಲುಗಿನ ಖ್ಯಾತ ನಿರ್ದೇಶಕ ವಿಜಯ್ ಕುಮಾರ್ ಕೊಂಡ ನಿರ್ದೇಶಿಸುತ್ತಿರುವ ನಟ ನಿಖಿಲ್ ಕುಮಾರಸ್ವಾಮಿ ಅಭಿನಯದ ಚಿತ್ರದ ಟೈಟಲ್ ಮತ್ತು ಮೋಷನ್ ಪೋಸ್ಟರ್ ಅನ್ನು ಸೆಪ್ಟೆಂಬರ್ 11ನೇ ತಾರೀಖಿಗೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
ನಟ ನಿಖಿಲ್ ಕುಮಾರಸ್ವಾಮಿ ಅವರ 4ನೇ ಸಿನಿಮಾ ಇದಾಗಿದ್ದು, ಅರ್ಜುನ್ ಜನ್ಯ ಸಂಗೀತವಿರಲಿದೆ. ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳಲ್ಲಿ ಈ ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಿಸಿದೆ.
