
ಮಹೇಶ್ ಕುಮಾರ್ ನಿರ್ದೇಶನದ ರೋರಿಂಗ್ ಸ್ಟಾರ್ ಶ್ರೀಮುರಳಿ ಅಭಿನಯದ ಬಹು ನಿರೀಕ್ಷೆಯ ‘ಮದಗಜ’ ಸಿನಿಮಾ ಚಿತ್ರೀಕರಣವನ್ನು ಸೆಪ್ಟೆಂಬರ್ 19ರಿಂದ ಪುನರಾರಂಭ ಮಾಡಲು ಚಿತ್ರತಂಡ ನಿರ್ಧರಿಸಿದೆ.
ಶ್ರೀಮುರಳಿ ಅಭಿಮಾನಿಗಳಲ್ಲಿ ಈ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಾಗಿದೆ. ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸಿದ್ದು, ಉಮಾಪತಿ ಶ್ರೀನಿವಾಸ್ ಗೌಡ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.
ಸೆಪ್ಟೆಂಬರ್ 19 ರಂದು ಎರಡನೇ ಹಂತದ ಶೂಟಿಂಗ್ ಅನ್ನು ಮುಂದುವರಿಸಲು ಚಿತ್ರತಂಡ ಸಜ್ಜಾಗಿದೆ.