alex Certify ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣ: ನಟಿ ರಾಗಿಣಿಗೆ ಸಧ್ಯಕ್ಕಿಲ್ಲ ರಿಲೀಫ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ಪ್ರಕರಣ: ನಟಿ ರಾಗಿಣಿಗೆ ಸಧ್ಯಕ್ಕಿಲ್ಲ ರಿಲೀಫ್

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಾಗಿಣಿ ದ್ವಿವೇದಿಯವರಿಗೆ ಇಂದು ಕೂಡ ಜಾಮೀನು ಸಿಕ್ಕಿಲ್ಲ. ಹೀಗಾಗಿ ನಟಿ ರಾಗಿಣಿ ಇನ್ನಷ್ಟು ದಿನಗಳ ಕಾಲ ಸಿಸಿಬಿ ವಶದಲ್ಲಿರುವ ಸಾಧ್ಯತೆ ದಟ್ಟವಾಗಿದೆ.

ನಟಿ ರಾಗಿಣಿ ದ್ವಿವೇದಿ ಜಾಮೀನು ಕೋರಿ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಸಿಸಿಬಿ ಕಸ್ಟಡಿ ಇನ್ನೂ ಅಂತ್ಯವಾಗದ ಹಿನ್ನಲೆಯಲ್ಲಿ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ನಡೆಸಲು ವಿಶೇಷ ನ್ಯಾಯಾಲಯ ನಿರಾಕರಿಸಿದ್ದು, ಸೆ.16ಕ್ಕೆ ವಿಚಾರಣೆ ಮುಂದೂಡಿದೆ.

ಇನ್ನು ಡ್ರಗ್ಸ್ ಪ್ರಕರಣದ ಆರೋಪಿಗಳಾದ ನಟಿ ರಾಗಿಣಿ, ಸಂಜನಾ, ರಾಹುಲ್, ಪ್ರಶಾಂತ್ ರಾಂಕ, ಲೂಮ್ ಪೆಪ್ಪರ್, ವಿರೇನ್ ಖನ್ನಾ ಅವರ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದ್ದು, ಸಿಸಿಬಿ ಅಧಿಕಾರಿಗಳು ಎಲ್ಲಾ ಆರೋಪಿಗಳನ್ನು ಇಂದು 1ನೇ ಎಸಿಎಂಎಂ ನ್ಯಾಯಾಲಯದ ಮುಂದೆ ಹಾಜರು ಪಡಿಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...