
ಎಲ್ಲೆಲ್ಲೂ ದೀಪಾವಳಿ ಹಬ್ಬದ ಸಡಗರ ಸಂಭ್ರಮ ಮನೆ ಮಾಡಿದ್ದು ಚಿತ್ರರಂಗದ ಕಲಾವಿದರು ಕೂಡ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ಶುಭಾಶಯ ತಿಳಿಸುತ್ತಿದ್ದಾರೆ.
ಸ್ಯಾಂಡಲ್ ವುಡ್ ನಲ್ಲಿ ಭಾರಿ ಬೇಡಿಕೆಯಲ್ಲಿರುವ ನಟಿಯರಾದ ಅದಿತಿ ಪ್ರಭುದೇವ ಹಾಗೂ ಶ್ರೀ ಲೀಲಾ ಮತ್ತು ಆಶಿಕಾ ರಂಗನಾಥ್ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಫೋಟೋ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.


