alex Certify ಹಸು ಮಾರಿ ಮಕ್ಕಳಿಗೆ ಮೊಬೈಲ್ ಕೊಡಿಸಿದ್ದ ರೈತನ ನೆರವಿಗೆ ಮುಂದಾದ ಸೋನು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಸು ಮಾರಿ ಮಕ್ಕಳಿಗೆ ಮೊಬೈಲ್ ಕೊಡಿಸಿದ್ದ ರೈತನ ನೆರವಿಗೆ ಮುಂದಾದ ಸೋನು…!

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ಎಲ್ಲರ ಬದುಕನ್ನು ಕಂಗೆಡಿಸಿದೆ. ಹೀಗಾಗಿ ಲಾಕ್ಡೌನ್ ಸಂದರ್ಭದಲ್ಲಿ ತಮ್ಮ ತಮ್ಮ ಊರುಗಳಿಗೆ ತೆರಳಲು ವಲಸೆ ಕಾರ್ಮಿಕರು ಪರದಾಡಿದ್ದ ವೇಳೆ ಖ್ಯಾತ ಬಾಲಿವುಡ್ ನಟ ಸೋನು ಸೂದ್ ಅವರುಗಳ ನೆರವಿಗೆ ನಿಂತಿದ್ದರು.

ಆ ಬಳಿಕವೂ ಸೋನು ಸೂದ್ ಅವರ ಮಾನವೀಯ ಕಾರ್ಯ ಮುಂದುವರೆದಿದೆ. ತಮ್ಮ ಮಕ್ಕಳ ಆನ್ಲೈನ್ ಶಿಕ್ಷಣಕ್ಕಾಗಿ ಮೊಬೈಲ್ ಖರೀದಿಸಲು ಸಾಧ್ಯವಾಗದೆ ಜೀವನೋಪಾಯಕ್ಕಾಗಿ ಸಾಕಿಕೊಂಡಿದ್ದ ಹಸು ಮಾರಾಟ ಮಾಡಿದ್ದ ರೈತನ ನೆರವಿಗೆ ಈಗ ಸೋನು ಸೂದ್ ಮುಂದಾಗಿದ್ದಾರೆ.

ಹಿಮಾಚಲ ಪ್ರದೇಶದ ಕಂಗ್ರಾ ಜಿಲ್ಲೆಯ ಗ್ರಾಮವೊಂದರ ರೈತ ಕುಲದೀಪ್ ಕುಮಾರ್, ತಮ್ಮ ಮಕ್ಕಳ ಶಿಕ್ಷಣಕ್ಕಾಗಿ ಮೊಬೈಲ್ ಖರೀದಿಸಲು ಹಸು ಮಾರಾಟ ಮಾಡಿದ್ದ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಸೋನು ಸೂದ್, ಆ ರೈತನ ಮಾಹಿತಿ ಕೇಳಿದ್ದಾರೆ. ಹಸು ವಾಪಸ್ ಕೊಡಿಸುವ ಜೊತೆಗೆ ಇತರೆ ಸಹಾಯ ಮಾಡುವುದಾಗಿ ಸೋನು ಸೂದ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...