alex Certify ಹಿರಿಯ ನಟಿ ಬಿ. ಶಾಂತಮ್ಮ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿರಿಯ ನಟಿ ಬಿ. ಶಾಂತಮ್ಮ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಶಾಂತಮ್ಮ ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ 95 ವರ್ಷದ ಅವರು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಚಿನ್ನಾರಿ ಮುತ್ತ, ಗಜೇಂದ್ರ, ಶ್ರುತಿ ಸೇರಿದಾಗ, ಬಾಂಬೆ ದಾದಾ ಸೇರಿದಂತೆ 250 ಕ್ಕೂ ಅಧಿಕ ಚಿತ್ರಗಳಲ್ಲಿ ಅಭಿನಯಿಸಿದ್ದ ಅವರು, ಚಿತ್ರರಂಗದಿಂದ ನಿವೃತ್ತಿಗೊಂಡ ಬಳಿಕ ಮೈಸೂರಿನಲ್ಲಿ ಕುಟುಂಬಸ್ಥರೊಂದಿಗೆ ವಾಸವಾಗಿದ್ದರು.

ಹಿರಿಯ ನಟಿ ಶಾಂತಮ್ಮ ಅವರ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದು, ಶಾಂತಮ್ಮ ಅವರ ಅಂತ್ಯಕ್ರಿಯೆ ನಾಳೆ ನಡೆಯಲಿದೆ ಎಂದು ತಿಳಿದುಬಂದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...