alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಖ್ಯಾತ ನಟ ಸೂರ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಖ್ಯಾತ ನಟ ಸೂರ್ಯ

ಕಾಲಿವುಡ್ ನ ಪ್ರತಿಭಾವಂತ ನಟ ಸೂರ್ಯ ಇಂದು ತಮ್ಮ 46ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಸೂರ್ಯ ‘ನೆರುಕ್ಕು ನೆರ್’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು.

ಸೂರ್ಯ ಹುಟ್ಟುಹಬ್ಬದ ಪ್ರಯುಕ್ತ ನಿನ್ನೆಯೇ ಅವರ 40ನೇ ಸಿನಿಮಾ ಫಸ್ಟ್ ಲುಕ್ ಅನ್ನು ಸನ್ ಪಿಕ್ಚರ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಸೂರ್ಯ ಮಾಸ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಪಾಂಡಿರಾಜ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಪ್ರಿಯಾಂಕ ಅರುಳ್ ಮೋಹನ್ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ

ಈ ಚಿತ್ರಕ್ಕೆ ‘ಎದರ್ಕ್ಕುಂ ತಣಿಂದವನ್’ ಎಂಬ ಶೀರ್ಷಿಕೆ ಇಡಲಾಗಿದೆ. ಇಂದು ಈ ಸಿನಿಮಾ ಸೆಕೆಂಡ್ ಲುಕ್ ಅನ್ನು ಈಗಾಗಲೇ ರಿಲೀಸ್ ಮಾಡಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಸಿನಿತಾರೆಯರಿಂದ ಹಾಗೂ ಅವರ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...