
ನಟಿ ಶರ್ಮಿಳಾ ಮಾಂಡ್ರೆ ಇಂದು ತಮ್ಮ 31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಶರ್ಮಿಳಾ ಮಾಂಡ್ರೆ ‘ಸಜನಿ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು ನಂತರ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದರು. ತೆಲುಗು ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ.
ಅರವಿಂದ್ ಶಾಸ್ತ್ರಿ ನಿರ್ದೇಶನದ, ನಟ ನೀನಾಸಂ ಸತೀಶ್ ಅಭಿನಯದ ‘ದಸರಾ’ ಎಂಬ ಸಿನಿಮಾದಲ್ಲಿ ಶರ್ಮಿಳಾ ಮಾಂಡ್ರೆ ನಾಯಕಿಯಾಗಿ ನಟಿಸಿದ್ದು, ನಿರ್ಮಾಣದ ಜವಾಬ್ದಾರಿಯನ್ನು ಅವರೇ ವಹಿಸಿಕೊಂಡಿದ್ದಾರೆ. ಶರ್ಮಿಳಾ ಮಾಂಡ್ರೆ 1989 ಅಕ್ಟೋಬರ್ 28ರಂದು ಜನಿಸಿದ್ದು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.