
ಇಂದು ದಕ್ಷಿಣ ಭಾರತದ ಖ್ಯಾತ ನಟಿ ರೋಜಾ ಸೆಲ್ವಮಣಿ ತಮ್ಮ 48ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರೋಜಾ 1991ರಂದು ತೆಲುಗಿನ ‘ಪ್ರೇಮ ತಪಸ್ಸು’ ಎಂಬ ಚಿತ್ರದ ಮೂಲಕ ಸಿನಿಮಾರಂಗ ಪ್ರವೇಶಿಸಿದರು. ನಂತರ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ.
ಕನ್ನಡದಲ್ಲಿ ಇವರು ನಟಿಸಿದ ಮೊದಲನೇ ಚಿತ್ರ ‘ಗಡಿಬಿಡಿ ಗಂಡ’ ನಂತರವೂ ರೋಜಾ ಕೆಲವು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ನಟಿ ರೋಜಾ ತಮ್ಮ ಕುಟುಂಬದ ಜೊತೆ ಬರ್ತ್ ಡೇ ಸೆಲೆಬ್ರೇಟ್ ಮಾಡಿದ್ದಾರೆ. ಇದನ್ನು ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದು ಅಭಿಮಾನಿಗಳು ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.
ರೋಜಾ 1972 ನವೆಂಬರ್ 17ರಂದು ಜನಿಸಿದ್ದು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
