ಬಹುಭಾಷಾ ನಟಿ ಮೀನಾ ಇಂದು 44ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಬಾಲನಟಿಯಾಗಿ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ನಂತರ ನಾಯಕಿಯಾಗಿ ನಟಿಸಿದರು.
ಕ್ರೇಜಿಸ್ಟಾರ್ ರವಿಚಂದ್ರನ್ ಅವರ ‘ಪುಟ್ನಂಜ’ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಂತರ ಸ್ಯಾಂಡಲ್ ವುಡ್ ನ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿದ್ದಾರೆ.
ನಟಿ ಮೀನಾ 1976 ಸೆಪ್ಟೆಂಬರ್ 16ರಂದು ಚೆನ್ನೈನಲ್ಲಿ ಜನಿಸಿದ್ದು, ಇಂದು 44ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ.