![](https://kannadadunia.com/wp-content/uploads/2021/02/d65dbe1a-6a6e-44fc-9f53-8a2c9706fd42.jpg)
ಮೀರಾ ಜಾಸ್ಮಿನ್ 2001ರಂದು ಮಲಯಾಳಂನ ‘ಸೂತ್ರಧಾರನ್’ ಎಂಬ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು ನಂತರ ಸಾಕಷ್ಟು ಸಿನಿಮಾಗಳಲ್ಲಿ ನಾಯಕಿಯಾಗಿ ಮಿಂಚಿದರು. 2004ರಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆ ‘ಮೌರ್ಯ’ ಸಿನಿಮಾದಲ್ಲಿ ನಟಿಸುವ ಮೂಲಕ ಕನ್ನಡ ಸಿನಿಮಾರಂಗಕ್ಕೂ ಎಂಟ್ರಿ ಕೊಟ್ಟರು. ದಕ್ಷಿಣ ಭಾರತದ ಜನಪ್ರಿಯ ನಟಿಯಾಗಿ ಹೊರಹೊಮ್ಮಿದರು.
ದರ್ಶನ್ ಹುಟ್ಟುಹಬ್ಬಕ್ಕೂ ಮುಂಚೆಯೇ ಶುಭಾಶಯ ತಿಳಿಸಿದ ನವರಸನಾಯಕ ಜಗ್ಗೇಶ್
ಮೀರಾ ಜಾಸ್ಮಿನ್ ತಮಿಳು, ತೆಲುಗು, ಕನ್ನಡ ಹಾಗೂ ಮಲಯಾಳಂನ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ನಟಿ ಮೀರಾ ಜಾಸ್ಮಿನ್ 1982 ಫೆಬ್ರವರಿ 15ರಂದು ಜನಿಸಿದ್ದು ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.