![](https://kannadadunia.com/wp-content/uploads/2021/03/Ali-Bhatt-in-pink-Madhurya-lehenga-custom-made-Diwali-2020.jpg)
ನಟಿ ಆಲಿಯಾ ಭಟ್ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟಿ ಆಲಿಯಾ ಭಟ್ 1999ರಂದು ‘ಸಂಘರ್ಷ್’ ಎಂಬ ಚಿತ್ರದಲ್ಲಿ ಬಾಲನಟಿಯಾಗಿ ತಮ್ಮ ಸಿನಿಪಯಣ ಆರಂಭಿಸಿದರು. ನಂತರ 2012 ರಂದು ಕರಣ್ ಜೋಹರ್ ನಿರ್ದೇಶನದ ‘ಸ್ಟೂಡೆಂಟ್ ಆಫ್ ದಿ ಇಯರ್’ ಎಂಬ ರೊಮ್ಯಾಂಟಿಕ್ ಕಾಮಿಡಿ ಡ್ರಾಮಾ ಒಳಗೊಂಡ ಸಿನಿಮಾದಲ್ಲಿ ಮೊದಲ ಬಾರಿ ನಾಯಕಿಯಾಗಿ ಅಭಿನಯಿಸಿದರು.
ನಾಳೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ‘ಭಜರಂಗಿ 2’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್
ನಂತರ ಸಾಕಷ್ಟು ಸಿನಿಮಾಗಳಲ್ಲಿ ಆಲಿಯಾ ಭಟ್ ನಟಿಸಿದ್ದು, ಇತ್ತೀಚೆಗೆ ರಾಜಮೌಳಿ ನಿರ್ದೇಶನದ ಜೂನಿಯರ್ ಎನ್.ಟಿ.ಆರ್. ಹಾಗೂ ರಾಮ್ ಚರಣ್ ಅಭಿನಯದ ಬಹು ನಿರೀಕ್ಷೆಯ ‘ಆರ್ ಆರ್ ಆರ್’ ಚಿತ್ರದಲ್ಲಿ ಸೀತಾ ಎಂಬ ಪಾತ್ರದಲ್ಲಿ ಅಭಿನಯಿಸಿದ್ದಾರೆ. ನಟಿ ಆಲಿಯಾ ಭಟ್ 1993 ಮಾರ್ಚ್ 15ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.