![Allu Arjun captures Hyderabad in black and white. Breathtaking pics out - Movies News](https://akm-img-a-in.tosshub.com/indiatoday/images/story/202012/Allu_Arjun_captures_Hyderabad_1200x768.jpeg?dGrJm5uBY4VOyr_4C7JbYixLvmTcXpU4&size=1200:675)
ಟಾಲಿವುಡ್ ನ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಇಂದು ತಮ್ಮ 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಅಲ್ಲು ಅರ್ಜುನ್ 2003ರಂದು ಕೆ. ರಾಘವೇಂದ್ರ ರಾವ್ ನಿರ್ದೇಶನದ ‘ಗಂಗೋತ್ರಿ’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ನಂತರ 2004ರಂದು ಸುಕುಮಾರ್ ನಿರ್ದೇಶನದ ‘ಆರ್ಯ’ ಸಿನಿಮಾದಲ್ಲಿ ಅಭಿನಯಿಸಿದ್ದು, ಈ ಚಿತ್ರ ಸೂಪರ್ ಡೂಪರ್ ಹಿಟ್ ಆಗಿತ್ತು. ಈ ಸಿನಿಮಾ ಮೂಲಕ ಅಲ್ಲು ಅರ್ಜುನ್ ಟಾಲಿವುಡ್ ನ ಸ್ಟಾರ್ ನಟರಾಗಿ ಹೊರಹೊಮ್ಮಿದರು.
ಅಲ್ಲು ಅರ್ಜುನ್ ಹುಟ್ಟುಹಬ್ಬಕ್ಕೆ ಧಮಾಕ….! ಪುಷ್ಪ ಟೀಸರ್ ಬಿಡುಗಡೆ
ಅಲ್ಲು ಅರ್ಜುನ್ ಡ್ಯಾನ್ಸ್ ಗೆ ಫಿದಾ ಆದವರಿಲ್ಲ. ಎಲ್ಲಾ ರೀತಿಯ ಪಾತ್ರಕ್ಕೂ ಸೈ ಎನಿಸಿಕೊಂಡಿರುವ ಅಲ್ಲು ಅರ್ಜುನ್ ಅಪಾರ ಅಭಿಮಾನಿಗಳ ಬಳಗವನ್ನೇ ಹೊಂದಿದ್ದಾರೆ. ಕರ್ನಾಟಕದಲ್ಲೂ ಇವರಿಗೆ ಸಾಕಷ್ಟು ಅಭಿಮಾನಿಗಳಿದ್ದಾರೆ.
ಅಲ್ಲು ಅರ್ಜುನ್ ಅವರ ಹುಟ್ಟುಹಬ್ಬದ ಪ್ರಯುಕ್ತ ನಿನ್ನೆಯೇ ಅವರ ಬಹುನಿರೀಕ್ಷೆಯ ‘ಪುಷ್ಪ’ ಚಿತ್ರದ ಟೀಸರ್ ಅನ್ನು ಬಿಡುಗಡೆ ಮಾಡಲಾಗಿದೆ. ಸುಕುಮಾರ್ ಈ ಸಿನಿಮಾ ನಿರ್ದೇಶಿಸಿದ್ದು, ರಶ್ಮಿಕಾ ಮಂದಣ್ಣ ನಾಯಕಿಯಾಗಿ ಅಭಿನಯಿಸಿದ್ದಾರೆ. ಅಲ್ಲು ಅರ್ಜುನ್ ಹುಟ್ಟುಹಬ್ಬದ ಪ್ರಯುಕ್ತ ಈಗಾಗಲೇ ಕಾಮನ್ ಡಿಪಿಯನ್ನು ರಿಲೀಸ್ ಮಾಡಲಾಗಿದೆ.