alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಐಶಾನಿ ಶೆಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಐಶಾನಿ ಶೆಟ್ಟಿ

ನಟಿ ಐಶಾನಿ ಶೆಟ್ಟಿ ಇಂದು ತಮ್ಮ 26ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಐಶಾನಿ ಶೆಟ್ಟಿ 2014ರಂದು ಸೆಬಾಸ್ಟಿಯನ್ ಡೇವಿಡ್ ನಿರ್ದೇಶನದ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ ಎಂಬ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ನಂತರ 2015ರಂದು ಯೋಗರಾಜ್ ಭಟ್ ನಿರ್ದೇಶನದಲ್ಲಿ ಮೂಡಿಬಂದ ʼವಾಸ್ತುಪ್ರಕಾರʼ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ಇವರು ಕನ್ನಡ ಚಿತ್ರರಂಗದ ಒಬ್ಬ ಪ್ರತಿಭಾವಂತ ನಟಿಯಾಗಿದ್ದಾರೆ.

ಫೋನ್‌ ರಿಪೇರಿ ಮಾಡದಿರಲು ಲಂಚ ಕೊಟ್ಟ ಪತಿ…! ಪತ್ರ ನೋಡಿದ ಅಂಗಡಿಯವನಿಗೆ ‌ʼಶಾಕ್ʼ

ಐಶಾನಿ ಶೆಟ್ಟಿ ‘ಕಾಜಿ’ ಎಂಬ ಶಾರ್ಟ್ ಫಿಲ್ಮ್ ಮೂಲಕ ನಿರ್ದೇಶಕರಾಗಿ ಎಂಟ್ರಿ ಕೊಟ್ಟರು. ತಾವು ನಟಿಸಿದ ‘ರಾಕೆಟ್’ ಚಿತ್ರದ ತಣ್ಣಗೆ ಇದ್ವಿ ಎಂಬ ಹಾಡಿಗೆ ಧ್ವನಿಗೂಡಿಸಿದ್ದರು. ನಟಿ  ಐಶಾನಿ ಶೆಟ್ಟಿ 1995 ಏಪ್ರಿಲ್ 15ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...