
ನಟಿ ಹರ್ಷಿಕಾ ಪೂಣಚ್ಚ ಇಂದು ತಮ್ಮ 31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಹರ್ಷಿಕಾ 2008ರಂದು ‘ಪಿಯುಸಿ’ ಎಂಬ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. 2010ರಂದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ‘ಜಾಕಿ’ ಸಿನಿಮಾದಲ್ಲಿ ‘ಯಶೋಧ’ ಎಂಬ ಪಾತ್ರದಲ್ಲಿ ಅಭಿನಯಿಸಿದ್ದ ಇವರಿಗೆ ಬೆಸ್ಟ್ ಸೈಡ್ ಆ್ಯಕ್ಟರ್ ಎಂಬ ಪ್ರಶಸ್ತಿಯು ದೊರೆಯಿತು.
ಹುಟ್ಟುಹಬ್ಬದ ಸಂಭ್ರಮದಲ್ಲಿ ನಟ ಕಾರ್ತಿಕ್ ಜಯರಾಮ್
ಹಲವಾರು ಭಾಷೆಗಳಲ್ಲಿ ಅಭಿನಯಿಸಿರುವ ಹರ್ಷಿಕಾ ಪೂಣಚ್ಚ ಇತ್ತೀಚೆಗೆ ಪವನ್ ಸಿಂಗ್ ಜೊತೆ ಭೋಜಪುರಿಯ ಚಿತ್ರವೊಂದರಲ್ಲಿ ನಟಿಸಿದ್ದಾರೆ. ನಟಿ ಹರ್ಷಿಕಾ ಪೂಣಚ್ಚ 1990 ಮೇ 1ರಂದು ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಹಲವಾರು ಸಿನಿತಾರೆಯರು ಹರ್ಷಿಕಾ ಪೂಣಚ್ಚ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.