alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ವಿನಯ್ ರಾಜ್ ಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ವಿನಯ್ ರಾಜ್ ಕುಮಾರ್

ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರ ನಟ ವಿನಯ್ ರಾಜ್ ಕುಮಾರ್ ಇಂದು ತಮ್ಮ 32ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ವಿನಯ್ ರಾಜ್ ಕುಮಾರ್ ಆರಂಭದಲ್ಲಿ ಬಾಲನಟನಾಗಿ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ‘ಸಿದ್ದಾರ್ಥ್’ ಚಿತ್ರದಲ್ಲಿ ವಿನಯ್ ರಾಜ್ ಕುಮಾರ್ ಮೊಟ್ಟಮೊದಲ ಬಾರಿಗೆ ನಾಯಕನಾಗಿ ಅಭಿನಯಿಸಿದರು. ಇತ್ತೀಚೆಗೆ ವಿನಯ್ ರಾಜ್ ಕುಮಾರ್ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ.

ಅಲ್ಲು ಅರ್ಜುನ್ ನಟನೆಯ ‘ಆರ್ಯ’ ಸಿನಿಮಾ ತೆರೆಮೇಲೆ ಬಂದು ಇಂದಿಗೆ 17 ವರ್ಷ

ಇಂದು ಹಲವಾರು ಸಿನಿಮಾ ಕಲಾವಿದರು ವಿನಯ್ ರಾಜ್ ಕುಮಾರ್ ಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದು, ರಾಘವೇಂದ್ರ ರಾಜ್ ಕುಮಾರ್ ಕೂಡ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಪುತ್ರ ವಿನಯ್ ರಾಜ್ ಕುಮಾರ್ ಗೆ ಹುಟ್ಟುಹಬ್ಬದ ಶುಭ ಕೋರಿದ್ದಾರೆ.

ಕುಟುಂಬದೊಂದಿಗೆ ವಿನಯ್ ರಾಜ್ ಕುಮಾರ್ ತೆಗೆಸಿಕೊಂಡಿರುವ ಹಲವಾರು ಫೋಟೋಗಳನ್ನು ಹೊಂದಿಸಿ ವಿಡಿಯೋ ಮಾಡಿದ್ದಾರೆ. ಇದನ್ನು ಸೋಶಿಯಲ್ ಮೀಡಿಯಾದಲ್ಲಿ ರಾಘವೇಂದ್ರ ರಾಜ್ ಕುಮಾರ್ ಅಪ್ಲೋಡ್ ಮಾಡಿದ್ದಾರೆ. ಈ ವಿಡಿಯೋಗೇ ತಮ್ಮ ತಂದೆ ವರನಟ ಡಾ.ರಾಜ್ ಕುಮಾರ್ ಅವರ ಹಾಡೊಂದನ್ನು ಸೆಟ್ ಮಾಡಿದ್ದು ‘ಹ್ಯಾಪಿ ಬರ್ತ್ ಡೇ ವಿನು ಮಗನೇ’ ಎಂದು ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...