alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ನಿಶ್ವಿಕಾ ನಾಯ್ಡು

ಸ್ಯಾಂಡಲ್ ವುಡ್ ನ ಯುವ ನಟಿ ನಿಶ್ವಿಕಾ ನಾಯ್ಡು ಇಂದು ತಮ್ಮ 25ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಿಶ್ವಿಕಾ ನಾಯ್ಡು 2018ರಂದು ಚಿರಂಜೀವಿ ಸರ್ಜಾ ಜೊತೆ ‘ಅಮ್ಮ ಐ ಲವ್ ಯು’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. 2020ರಂದು ‘ಜಂಟಲ್ ಮನ್’ ಸಿನಿಮಾದಲ್ಲಿ ನಟಿಸಿದ ನಂತರ ನಿಶ್ವಿಕಾ ಸಾಕಷ್ಟು ಜನಪ್ರಿಯತೆ ಪಡೆದರು.

ಯೋಗಾಸನ ಮಾಡಿದ ಶ್ವಾನ….! ವಿಡಿಯೋ ವೈರಲ್

ನಟಿ ನಿಶ್ವಿಕಾ ನಾಯ್ಡು ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಶರಣ್ ಜೊತೆ ‘ಗುರು ಶಿಷ್ಯರು’ ಚಿತ್ರದಲ್ಲಿ ಅಭಿನಯಿಸುತ್ತಿದ್ದು, ನಿಶ್ವಿಕಾ ನಾಯ್ಡು ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಅವರ ಫಸ್ಟ್ ಲುಕ್ ಅನ್ನು ಬಿಡುಗಡೆ ಮಾಡುವ ಮೂಲಕ ಉಡುಗೊರೆಯಾಗಿ ನೀಡಲಿದೆ ಚಿತ್ರತಂಡ. ಸಾಮಾಜಿಕ ಜಾಲತಾಣದಲ್ಲಿ ನಿಶ್ವಿಕಾ ನಾಯ್ಡು ಅವರಿಗೆ ಅಭಿಮಾನಿಗಳಿಂದ ಹಾಗೂ ಸಿನಿತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...