ಖ್ಯಾತ ಹಿರಿಯ ನಟ ಆಶಿಷ್ ವಿದ್ಯಾರ್ಥಿ ಇಂದು ತಮ್ಮ 59ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1986ರಂದು ಕನ್ನಡದ ‘ಆನಂದ್’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು.
ನಟ ಆಶಿಷ್ ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ, ಬೆಂಗಾಲಿ ಹಾಗೂ ಹಿಂದಿ ಸಿನಿಮಾಗಳಲ್ಲಿ ಅಭಿನಯಿಸಿ ಸೈ ಎನಿಸಿಕೊಂಡಿದ್ದಾರೆ.
ಜೂನ್ 28 ರಿಂದ ‘ಲಗಾಮ್’ ಸಿನಿಮಾ ಚಿತ್ರೀಕರಣ
ಆಶಿಷ್ ವಿದ್ಯಾರ್ಥಿ 1995ರಂದು ಬೆಸ್ಟ್ ಸಪೋರ್ಟಿಂಗ್ ಆ್ಯಕ್ಟರ್ ರಾಷ್ಟ್ರ ಪ್ರಶಸ್ತಿಯನ್ನು ಪಡೆದರು. ಸಾಕಷ್ಟು ಸಿನಿಮಾಗಳಲ್ಲಿ ಖಳನಾಯಕನ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಿನಿಮಾ ಕಲಾವಿದರು ಇಂದು ಆಶೀಷ್ ವಿದ್ಯಾರ್ಥಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.