alex Certify ಹೊಸ ದಾಖಲೆಗೆ ಸಜ್ಜಾಗುತ್ತಿದ್ದಾರೆ ಟಾಲಿವುಡ್ ಯಂಗ್ ರೆಬಲ್ ಸ್ಟಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ದಾಖಲೆಗೆ ಸಜ್ಜಾಗುತ್ತಿದ್ದಾರೆ ಟಾಲಿವುಡ್ ಯಂಗ್ ರೆಬಲ್ ಸ್ಟಾರ್

 

ಟಾಲಿವುಡ್ ಯಂಗ್ ರೆಬಲ್ ಸ್ಟಾರ್ ಬಾಹುಬಲಿ ಪ್ರಭಾಸ್ ಅಭಿನಯದ ಹೊಸ ಚಿತ್ರ ʼಆದಿಪುರುಷ್ʼ ಹೊಸ ದಾಖಲೆಗೆ ಸಜ್ಜಾಗಿದೆ. ಈಗಾಗಲೇ ಚಿತ್ರದ ಫಸ್ಟ್ ಲುಕ್ ನಿಂದ ಗಮನ ಸೆಳೆದಿರುವ ಆದಿಪುರುಷ್ ಬರೋಬ್ಬರಿ 400 ಕೋಟಿ ರೂ. ಬಜೆಟ್ ನಲ್ಲಿ ನಿರ್ಮಾಣವಾಗುತ್ತಿದೆಯಂತೆ.

ಆದಿಪುರುಷ್ ಚಿತ್ರದಲ್ಲಿ ಬಾಲಿವುಡ್ ನಟ ಸೈಫ್ ಅಲಿ ಖಾನ್ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬುದು ವಿಶೇಷ. ಓಂ ರೌತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರ ಪೌರಾಣಿಕ ಕಥೆಯನ್ನು ಆಧರಿಸಿದೆ ಎಂದು ಹೇಳಲಾಗುತ್ತಿದೆ.

ಇನ್ನು ನಿರ್ದೇಶಕ ಓಂ ರೌತ್ ಅವರ ಬಿಗ್ ಬಜೆಟ್ ಮೂವಿ ಇದಾಗಿದ್ದು, ವಿ ಎಫ್ ಎಕ್ಸ್ ತಂತ್ರಜ್ಞಾನವನ್ನು ವ್ಯಾಪಕವಾಗಿ ಬಳಸಿಕೊಳ್ಳಲು ಚಿತ್ರತಂಡ ನಿರ್ಧರಿಸಿದೆಯಂತೆ. ಅಲ್ಲದೇ ಭಾರತೀಯ ಚಿತ್ರರಂಗದಲ್ಲೇ ಹೊಸದೊಂದು ದಾಖಲೆ ನಿರ್ಮಿಸಲು ಚಿತ್ರತಂಡ ಸಜ್ಜಾಗಿದೆಯಂತೆ. ಈ ಮೂಲಕ ಹೊಸದೊಂದು ದಾಖಲೆಯತ್ತ ಮುಖ ಮಾಡಿದ್ದಾರೆ ಬಾಹುಬಲಿ ಪ್ರಭಾಸ್ ಎನ್ನಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...