alex Certify BREAKING: ಬಾಲಿವುಡ್​ ನಟ ಆಮೀರ್​ ಖಾನ್​ಗೆ ಕೊರೊನಾ ಪಾಸಿಟಿವ್​..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬಾಲಿವುಡ್​ ನಟ ಆಮೀರ್​ ಖಾನ್​ಗೆ ಕೊರೊನಾ ಪಾಸಿಟಿವ್​..!

ಬಾಲಿವುಡ್​ ನಟ ಆಮೀರ್​ ಖಾನ್​ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಕಳೆದ ವಾರವಷ್ಟೇ ನಟ ಆಮೀರ್​ ಖಾನ್​ ಸೋಶಿಯಲ್ ಮೀಡಿಯಾಗೆ ಗುಡ್​ ಬೈ ಹೇಳಿದ್ದರಿಂದ ಅವರ ವಕ್ತಾರ ಆಮೀರ್​ ಖಾನ್​ಸೋಂಕಿಗೆ ಒಳಗಾಗಿರುವ ಬಗ್ಗೆ ಹೇಳಿಕೆ ನೀಡಿದ್ದಾರೆ.

ಆಮೀರ್​ ಖಾನ್​ ಸದ್ಯ ಹೋಂ ಕ್ವಾರಂಟೈನ್​ನಲ್ಲಿದ್ದು ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದು ಆಮೀರ್ ಖಾನ್​ ವಕ್ತಾರ ಮಾಹಿತಿ ನೀಡಿದ್ದಾರೆ.

ಆಮೀರ್​ ಖಾನ್​ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಅವರು ಈಗ ಹೋಂ ಕ್ವಾರಂಟೈನ್​ನಲ್ಲಿ ಇದ್ದಾರೆ. ಕೊರೊನಾ ಮಾರ್ಗಸೂಚಿಗಳನ್ನ ಪಾಲನೆ ಮಾಡುತ್ತಿರುವ ಆಮೀರ್​ ಕ್ಷೇಮವಾಗಿದ್ದಾರೆ. ಆಮೀರ್​ ಖಾನ್​ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದವರು ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳುವುದರ ಜೊತೆಗೆ ಕೊರೊನಾ ಪರೀಕ್ಷೆಗೆ ಒಳಗಾಗಿ. ನಿಮ್ಮ ಕಾಳಜಿ ಹಾಗೂ ಹಾರೈಕೆಗಳಿಗೆ ಧನ್ಯವಾದ ಎಂದು ಆಮೀರ್​ ಖಾನ್​ರ ವಕ್ತಾರ ಹೇಳಿದ್ದಾರೆ.

56 ವರ್ಷದ ನಟ ತಮ್ಮ ಹುಟ್ಟುಹಬ್ಬದ ಸಂಭ್ರಮದ ನಡುವೆಯೇ ಅಭಿಮಾನಿಗಳಿಗೆ ಸೋಶಿಯಲ್​ ಮೀಡಿಯಾದಿಂದ ದೂರ ಇರೋದಾಗಿ ಹೇಳುವ ಮೂಲಕ ಶಾಕ್​ ನೀಡಿದ್ದರು.

 

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...