ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಆರು ವರ್ಷದ ಸಮನ್ವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ರಿಯಾಲಿಟಿ ಶೋನಲ್ಲಿ ಭಾಗಿಯಾಗಿದ್ದ ತಾಯಿ ಅಮೃತಾ ಮತ್ತು ಮಗಳು ಸಮನ್ವಿ ಕಳೆದ ವಾರ ರಿಯಾಲಿಟಿ ಶೋನಿಂದ ಎಲಿಮಿನೇಟ್ ಆಗಿದ್ದರು.
ತಾಯಿ-ಮಗಳು ತೆರಳುತ್ತಿದ್ದ ಸ್ಕೂಟಿಗೆ ಲಾರಿ ಡಿಕ್ಕಿಯಾಗಿ ಘಟನೆ ನಡೆದಿದೆ. ಕೋಣನಕುಂಟೆಯ ವಾಜರಹಳ್ಳಿಯಲ್ಲಿ ನಡೆದ ಅಪಘಾತದಲ್ಲಿ ತಾಯಿ ಅಮೃತಾ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕನನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ವಶಕ್ಕೆ ಪಡೆದಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.