
ನವದೆಹಲಿ: ಬಾಲಿವುಡ್ ನಟ ಅರುಣ್ ಗೋವಿಲ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಕಿರುತೆರೆಯಲ್ಲಿ ಪ್ರಸಾರವಾಗಿದ್ದ ‘ರಾಮಾಯಣ’ ಧಾರಾವಾಹಿಯಲ್ಲಿ ರಾಮನ ಪಾತ್ರಧಾರಿಯಾಗಿದ್ದ ಅರುಣ್ ಗೋವಿಲ್ ಇಂದು ನಡೆದ ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ದೆಹಲಿಯ ಬಿಜೆಪಿ ಕಚೇರಿಯಲ್ಲಿ ಅರುಣ್ ಗೋವಿಲ್ ಅವರು ಪಕ್ಷದ ನಾಯಕ ಅರುಣ್ ಸಿಂಗ್ ಸಮ್ಮುಖದಲ್ಲಿ ಕಮಲ ಪಕ್ಷಕ್ಕೆ ಸೇರಿದ್ದಾರೆ.