
ಮುಂಬೈ: ವೆಬ್ಸೈಟ್ನಲ್ಲಿ ಅಶ್ಲೀಲ ವಿಡಿಯೋ ಅಪ್ ಲೋಡ್ ಮಾಡಿದ್ದ ನಟಿ ಗೆಹಾನಾ ವಸಿಷ್ಠ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಗೆಹಾನಾ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿ ಅಪ್ಲೋಡ್ ಮಾಡಿದ ಹಿನ್ನೆಲೆಯಲ್ಲಿ ಮುಂಬೈ ಅಪರಾಧ ವಿಭಾಗದ ಪೊಲೀಸರು ಆಕೆಯನ್ನು ಬಂಧಿಸಿದ್ದು ನಾಳೆ ಕೋರ್ಟಿಗೆ ಹಾಜರುಪಡಿಸಲಿದ್ದಾರೆ. ಮಧ್ಯಪ್ರದೇಶ ಮೂಲದ ಗೆಹಾನಾ ಖಾಸಗಿ ವಾಹಿನಿ ನಿರೂಪಕಿಯಾಗಿ ವೃತ್ತಿ ಜೀವನ ಆರಂಭಿಸಿದ್ದು ಬಳಿಕ ಮಾಡೆಲ್ ನಲ್ಲಿ ಗುರುತಿಸಿಕೊಂಡಿದ್ದಾರೆ. ಸುಮಾರು 80 ಜಾಹೀರಾತುಗಳಲ್ಲಿ ಕಾಣಿಸಿಕೊಂಡಿರುವ ಆಕೆ ಅನೇಕ ಚಿತ್ರಗಳಲ್ಲಿಯೂ ಅಭಿನಯಿಸಿದ್ದಾರೆ.
ಅಂದ ಹಾಗೇ, ಗೆಹಾನಾ ಆಗಾಗ ಸಾಮಾಜಿಕ ಜಾಲತಾಣಗಳಲ್ಲಿ ಯುವಕರ ಎದೆ ಬಡಿತ ಹೆಚ್ಚಿಸುವ ಫೋಟೋ, ವಿಡಿಯೋಗಳನ್ನು ಪೋಸ್ಟ್ ಮಾಡುತ್ತಾಳೆ.