ನಟ ನರೇಶ್ ಮತ್ತು ನಟಿ ಪವಿತ್ರಾ ಲೋಕೇಶ್ ಬಗ್ಗೆ ಅಪಪ್ರಚಾರ ನಡೆಸಿದ ಆರೋಪದ ಹಿನ್ನಲೆಯಲ್ಲಿ ಕೆಲವು ವೆಬ್ಸೈಟ್ ಗಳು ಮತ್ತು ಯುಟ್ಯೂಬ್ ಚಾನೆಲ್ ಗಳ ವಿರುದ್ಧ ದೂರು ನೀಡಲಾಗಿದೆ.
ನಟ ನರೇಶ್ ಮತ್ತು ನಟಿ ಪವಿತ್ರಾ ಲೋಕೇಶ್ ಅವರು ದೂರು ದಾಖಲಿಸಿದ್ದಾರೆ. ಅಪಪ್ರಚಾರ ನಡೆಸಿದ ವೆಬ್ ಸೈಟ್ ಮತ್ತು ಯುಟ್ಯೂಬ್ ಚಾನಲ್ ಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ. ಅವರ ದೂರಿನ ಮೇರೆಗೆ ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ ಎಂದು ಹೈದರಾಬಾದ್ ಸೈಬರ್ ಕ್ರೈಂ ಎಸಿಪಿ ಕೆ.ವಿ.ಎಂ. ಪ್ರಸಾದ್ ಹೇಳಿದ್ದಾರೆ.