ಬೆಂಗಳೂರು: ಕನ್ನಡ ಚಿತ್ರರಂಗದ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಮಾರ್ಗಸೂಚಿಯನ್ನು ಬದಲಿಸಿ ಚಿತ್ರಮಂದಿರದಲ್ಲಿ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಿದೆ.
ಈ ಬಗ್ಗೆ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ವಾರ್ತಾ ಮತ್ತು ಪ್ರಸಾರ ಇಲಾಖೆ ಸಚಿವ ಸಿ.ಸಿ. ಪಾಟೀಲ್ ಅವರು, ಚಿತ್ರಮಂದಿರದಲ್ಲಿ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದ್ದು, ನಾಳೆಯಿಂದಲೇ ಚಿತ್ರಮಂದಿರದಲ್ಲಿ 100 ರಷ್ಟು ಪ್ರೇಕ್ಷಕರು ಸಿನಿಮಾ ವೀಕ್ಷಿಸಬಹುದು ಎಂದು ತಿಳಿಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪನವರ ಸೂಚನೆ ಮೇರೆಗೆ ಚಿತ್ರರಂಗದ ಗಣ್ಯರೊಂದಿಗೆ ಸಭೆ ನಡೆಸಲಾಗಿದ್ದು, ಶೇಕಡ 100 ರಷ್ಟು ಪ್ರೇಕ್ಷಕರಿಗೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಈ ಅವಕಾಶ ನಾಲ್ಕು ವಾರಗಳಿಗೆ ಮಾತ್ರ ಸೀಮಿತವಾಗಿರುತ್ತದೆ. ಚಿತ್ರಮಂದಿರಗಳಿಂದ ಕೊರೋನಾ ಹೆಚ್ಚಾದರೆ ಆದೇಶ ಮರುಪರಿಶಿಲಿಸಲಾಗುವುದು. ಮಾರ್ಗಸೂಚಿಯನ್ನು ಪ್ರೇಕ್ಷಕರು, ಸಿನಿಮಾ ಮಂದಿ ಪಾಲಿಸಬೇಕು. ಕೊರೋನಾ ಪ್ರಕರಣ ಹೆಚ್ಚಾದರೆ ನಿಯಮ ವಾಪಸ್ ಪಡೆಯಲಾಗುವುದು ಎಂದು ಹೇಳಲಾಗಿದೆ.
ಚಿತ್ರರಂಗದ ಮನವಿಗೆ ತಕ್ಷಣಕ್ಕೆ ಸ್ಪಂದಿಸಿದ ಸರ್ಕಾರಕ್ಕೆ ನಟ ಶಿವರಾಜ್ ಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ. ಸಚಿವರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು. ಕೋರೋನಾ ಕಾರಣದಿಂದ ಚಿತ್ರರಂಗಕ್ಕೆ ಬಾರಿ ಸಮಸ್ಯೆ ಎದುರಾಗಿದೆ. ನಿಯಮಗಳನ್ನು ಪಾಲಿಸುವುದರೊಂದಿಗೆ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಿದ್ದು, ಇದಕ್ಕಾಗಿ ಧನ್ಯವಾದ ಹೇಳುವುದಾಗಿ ತಿಳಿಸಿದ್ದಾರೆ.