alex Certify ಕಾರ್ಯಕ್ರಮದಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದ ನಟ ಶಾನವಾಜ್ ಪ್ರಧಾನ್ ನಿಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ಯಕ್ರಮದಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದ ನಟ ಶಾನವಾಜ್ ಪ್ರಧಾನ್ ನಿಧನ

ನವದೆಹಲಿ: ಹೃದಯಾಘಾತದಿಂದ ನಟ ಶಾನವಾಜ್ ಪ್ರಧಾನ್ ನಿಧನರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು.

ಸಾಮಾಜಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಅವರು, ತೀವ್ರ ಎದೆನೋವಿನಿಂದ ಬಳಲಿ ಕುಸಿದು ಬಿದ್ದರು. ತಕ್ಷಣ ಅವರನ್ನು ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ಕಳುಹಿಸಲಾಯಿತು, ಆದರೆ ಅಲ್ಲಿನ ವೈದ್ಯರು ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ. ಕೆಲ ತಿಂಗಳ ಹಿಂದೆ ಅವರಿಗೆ ಬೈಪಾಸ್ ಶಸ್ತ್ರಚಿಕಿತ್ಸೆಯಾಗಿದೆ.

ಶಾನವಾಜ್ ಪ್ರಧಾನ್ ಅವರು ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ ‘ಮಿರ್ಜಾಪುರ್’, ‘ರಯೀಸ್’ ಸೇರಿದಂತೆ ವಿವಿಧ ರೀತಿಯ ಚಲನಚಿತ್ರಗಳು, ಟಿವಿ ಕಾರ್ಯಕ್ರಮಗಳು ಮತ್ತು OTT ವೇದಿಕೆಗಳಲ್ಲಿ ಕೆಲಸ ಮಾಡಿದ್ದಾರೆ. ಅವರು ಅಲಿಫ್ ಲೈಲಾ, ಬ್ಯೋಮಕೇಶ್ ಬಕ್ಷಿ, ಬಂಧನ್ ಸಾತ್ ಜನಮೋನ್ ಕಾ, ‘ಎಂ.ಎಸ್. ಧೋನಿ: ದಿ ಅನ್‌ಟೋಲ್ಡ್ ಸ್ಟೋರಿ’ ಮೊದಲಾದ ಸೀರಿಸ್ ಮತ್ತು ಚಲನಚಿತ್ರಗಳಲ್ಲಿ ಪಾತ್ರ ನಿರ್ವಹಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...