alex Certify ಶಾಲೆ ದತ್ತು ಪಡೆದ ಕಿಚ್ಚನಿಗೆ ಪ್ರಶಂಸೆಯ ಮಹಾಪೂರ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆ ದತ್ತು ಪಡೆದ ಕಿಚ್ಚನಿಗೆ ಪ್ರಶಂಸೆಯ ಮಹಾಪೂರ..!

ನಟ ಕಿಚ್ಚ ಸುದೀಪ್ ಸಿನಿಮಾ ಹೊರತುಪಡಿಸಿ ಬೇರೆ ಬೇರೆ ವಿಚಾರಗಳಿಗೂ ಸುದ್ದಿಯಾಗುತ್ತಲೇ ಇರುತ್ತಾರೆ. ಇತ್ತೀಚೆಗಷ್ಟೆ ಆಟೋ ಚಾಲಕನ ತಂಗಿಯ ಮದುವೆಯ ಖರ್ಚನ್ನು ಭರಿಸುವ ಮೂಲಕ ಮಾನವೀಯತೆ ಮೆರೆದಿದ್ದರು. ಇದೀಗ ಮತ್ತೊಂದು ಅದ್ಭುತ ಕೆಲಸ ಮಾಡಿದ್ದಾರೆ. ಹೀಗಾಗಿ ಪ್ರಶಂಸೆಯ ಮಹಾಪೂರವೇ ಹರಿದು ಬರುತ್ತಿದೆ.

ಹೌದು, ಈ ನಟ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯುವ ಮೂಲಕ ಅನೇಕರಿಗೆ ಮಾದರಿಯಾಗಿದ್ದಾರೆ. ಸುದೀಪ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಾಲ್ಕು ಶಾಲೆಗಳನ್ನು ದತ್ತು ಪಡೆದಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಮೂರು ಹಾಗೂ ಹಿರಿಯೂರು ತಾಲೂಕಿನ ಒಂದು ಸರ್ಕಾರಿ ಶಾಲೆಯನ್ನು ದತ್ತು ಪಡೆಯಲಾಗಿದೆ.

ಒಬವನಹಳ್ಳಿ, ಚಳ್ಳಕೆರೆ ಶಾಲೆ, ಪರುಶರಾಂಪುರ ಶಾಲೆ ಮತ್ತು ಚಿತ್ರದುರ್ಗದ ಶಾಲೆಯನ್ನು ದತ್ತು ಪಡೆದು ಶಾಲೆಯ ಸಂಪೂರ್ಣ ಅಭಿವೃದ್ಧಿಯನ್ನು ವಹಿಸಿಕೊಂಡಿದ್ದಾರೆ. ಈ ಶಾಲೆಗಳಿಗೆ ಬೇಕಾದ ಅಗತ್ಯ ಸೌಕರ್ಯಗಳನ್ನು ನೀಡುವುದಕ್ಕೆ ಟ್ರಸ್ಟ್ ಮುಂದಾಗಿದೆ. ಸುದೀಪ್ ಅವರ ಸಾಮಾಜಿಕ ಕಾರ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...